ಯೆಹೆಜ್ಕೇಲನು 20:41

ನಾನು ನಿಮ್ಮನ್ನು ಜನರಿಂದ ಹೊರತಂದು ನೀವು ಚದರಿರುವ ದೇಶಗಳೊಳಗಿಂದ ನಿಮ್ಮನ್ನು ಕೂಡಿಸುವಾಗ ನಿಮ್ಮ ಸುವಾಸನೆಯ ಸಂಗಡ ನಾನು ನಿಮ್ಮನ್ನು ಅಂಗೀಕರಿಸುವೆನು, ನಾನು ಅನ್ಯ ಜನಾಂಗಗಳ ಮುಂದೆ ನಿಮ್ಮಲ್ಲಿ ಪರಿಶುದ್ಧವೆನಿಸಿಕೊಳ್ಳು ವೆನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 20

39ನಿಮ್ಮ ವಿಷಯ ವಾಗಿ ಓ ಇಸ್ರಾಯೇಲಿನ ಮನೆತನದವರೇ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ನನಗೆ ಕಿವಿಗೊಡದಿದ್ದರೆ ಹೋಗಿ ಇನ್ನು ಮೇಲೆಯೂ ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ; ಆದರೆ ನಿಮ್ಮ ದಾನಗ ಳಿಂದಲೂ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.

40ನನ್ನ ಪರಿಶುದ್ಧ ಪರ್ವತದಲ್ಲಿ ಅಂದರೆ ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನ ದವರೆಲ್ಲರೂ ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿ ಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ ನಿಮ್ಮ ಎತ್ತುವ ಅರ್ಪಣೆಗಳನ್ನೂ ನಿಮ್ಮ ಕಾಣಿಕೆಗಳ ಪ್ರಥಮ ಫಲ ವನ್ನೂ ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.

41ನಾನು ನಿಮ್ಮನ್ನು ಜನರಿಂದ ಹೊರತಂದು ನೀವು ಚದರಿರುವ ದೇಶಗಳೊಳಗಿಂದ ನಿಮ್ಮನ್ನು ಕೂಡಿಸುವಾಗ ನಿಮ್ಮ ಸುವಾಸನೆಯ ಸಂಗಡ ನಾನು ನಿಮ್ಮನ್ನು ಅಂಗೀಕರಿಸುವೆನು, ನಾನು ಅನ್ಯ ಜನಾಂಗಗಳ ಮುಂದೆ ನಿಮ್ಮಲ್ಲಿ ಪರಿಶುದ್ಧವೆನಿಸಿಕೊಳ್ಳು ವೆನು.

42ಆಗ ನಾನು ನಿಮ್ಮ ಮೇಲೆ ಇಸ್ರಾಯೇಲ್‌ ದೇಶದಲ್ಲಿ ನನ್ನ ಕೈಯೆತ್ತಿ ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಿಂದ ನಿಮ್ಮನ್ನು ಕರೆದುಕೊಂಡು ಬರುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.

43ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು ನೀವು ಯಾವ ಸಂಗತಿ ಗಳಿಂದ ಅಶುದ್ಧವಾಗಿದ್ದಿರೋ ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳುವಿರಿ; ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿ ಯಲ್ಲಿಯೇ ನೀವು ಅಸಹ್ಯರಾಗುವಿರಿ.

ಯೆಹೆಜ್ಕೇಲನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी