ಯೆಹೆಜ್ಕೇಲನು 39:21

ನಾನು ನನ್ನ ಮಹಿಮೆಯನ್ನು ಅನ್ಯಜನಾಂಗಗಳಲ್ಲಿ ಸ್ಥಾಪಿಸುತ್ತೇನೆ; ಎಲ್ಲಾ ಅನ್ಯಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವವು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 39

19ನಾನು ನಿಮಗೋಸ್ಕರ ಅರ್ಪಿಸಿದ ನನ್ನ ಯಜ್ಞದಲ್ಲಿ ನಿಮಗೆ ತೃಪ್ತಿಯಾಗುವ ವರೆಗೂ ಕೊಬ್ಬನ್ನು ತಿಂದು ಮತ್ತೇರುವ ವರೆಗೂ ರಕ್ತವನ್ನು ಕುಡಿಯಬಹುದು.

20ಹೀಗೆ ನೀವು ನನ್ನ ಮೇಜಿನಲ್ಲಿ ಕುದುರೆಗಳಿಂದಲೂ ರಥಗಳಿಂದಲೂ ಶೂರರಿಂದಲೂ ಯುದ್ಧದ ಎಲ್ಲಾ ಮನುಷ್ಯರಿಂದಲೂ ತುಂಬುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.

21ನಾನು ನನ್ನ ಮಹಿಮೆಯನ್ನು ಅನ್ಯಜನಾಂಗಗಳಲ್ಲಿ ಸ್ಥಾಪಿಸುತ್ತೇನೆ; ಎಲ್ಲಾ ಅನ್ಯಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವವು.

22ಹೀಗೆ ಇಸ್ರಾಯೇಲನ ಮನೆತನದವರು ಕರ್ತನಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವ ರಾಗಿರುವೆನೆಂದು ತಿಳಿಯುವರು.

23ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಅನ್ಯಜನಾಂಗಗಳು ತಿಳಿಯುವವು; ಅವರು ನನಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಕತ್ತಿಯಿಂದ ಹತರಾದರು.

ಯೆಹೆಜ್ಕೇಲನು 39 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी