ಯೆಶಾಯ 26:20

ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.

ಸಂದರ್ಭದೊಂದಿಗೆ ಓದಿ · ಯೆಶಾಯ 26

18ನಾವು ಗರ್ಭಧರಿಸಿ ವೇದನೆಪಟ್ಟು ಗಾಳಿಯನ್ನು ಹೆತ್ತಂತಾಯಿತು, ಭೂಮಿಗೆ ನಮ್ಮಿಂದ ಯಾವ ಬಿಡು ಗಡೆಯೂ ಆಗಲಿಲ್ಲ. ಇಲ್ಲವೇ ಭೂಲೋಕದ ನಿವಾಸಿ ಗಳು ಬೀಳಲಿಲ್ಲ.

19ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.

20ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.

21ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.

ಯೆಶಾಯ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी