ಯೊರ್ದನಿಗೆ ಎದುರಿಗಿರುವ ಕೆರೀತ್ ಹಳ್ಳದ ಬಳಿ ಯಲ್ಲಿ ಅಡಗಿಕೊಂಡಿರು.
1ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
2ಕರ್ತನ ಮಾತು ಅವನಿಗೆ ಉಂಟಾಗಿ--ನೀನು ಈ ಸ್ಥಳವನ್ನು ಬಿಟ್ಟು ಪೂರ್ವ ದಿಕ್ಕಿಗೆ ಹೋಗಿ,
3ಯೊರ್ದನಿಗೆ ಎದುರಿಗಿರುವ ಕೆರೀತ್ ಹಳ್ಳದ ಬಳಿ ಯಲ್ಲಿ ಅಡಗಿಕೊಂಡಿರು.
4ನೀನು ಆ ಹಳ್ಳದ ನೀರನ್ನು ಕುಡಿಯುವಿ; ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು.
5ಅವನು ಹೋಗಿ ಕರ್ತನ ಮಾತಿನ ಹಾಗೆಯೇ ಮಾಡಿದನು; ಅಂದರೆ ಅವನು ಹೋಗಿ ಯೊರ್ದನಿಗೆ ಎದುರಾಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ವಾಸ ವಾಗಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ