೧ ಸಮುವೇಲನು 24:15

ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 24

13ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.

14ಇಸ್ರಾಯೇಲಿನ ಅರಸನು ಯಾರನ್ನು ಬೆನ್ನಟ್ಟಿ ಹೊರಟನು? ಯಾರನ್ನು ನೀನು ಹಿಂದಟ್ಟುತ್ತೀ? ಸತ್ತನಾಯಿಯನ್ನೇ? ಒಂದು ಕೀಟವನ್ನೇ?

15ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.

16ದಾವೀದನು ಈ ಮಾತುಗಳನ್ನು ಸೌಲನಿಗೆ ಹೇಳಿ ತೀರಿಸಿದಾಗ ಸೌಲನು--ನನ್ನ ಕುಮಾರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ ಅಂದನು; ಸೌಲನು ಸ್ವರವೆತ್ತಿ ಗಟ್ಟಿಯಾಗಿ ಅತ್ತನು.

17ದಾವೀದನಿಗೆ--ನೀನು ನನಗಿಂತ ನೀತಿವಂತನು; ನೀನು ನನಗೆ ಒಳ್ಳೇದನ್ನು ಮಾಡಿದಿ; ಆದರೆ ನಾನು ನಿನಗೆ ಕೇಡನ್ನು ಮಾಡಿದೆನು.

೧ ಸಮುವೇಲನು 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी