ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
13ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.
14ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು.
15ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
16ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
17ನಿಮಗೆ ಓ ನನ್ನ ಮಂದೆಯೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ದನಗಳ ಪಶುಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ