ಪ್ರಕಟನೆ 17:12

ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.

ಸಂದರ್ಭದೊಂದಿಗೆ ಓದಿ · ಪ್ರಕಟನೆ 17

10ಇದಲ್ಲದೆ ಅವು ಏಳು ಮಂದಿ ರಾಜರು; ಐದು ಮಂದಿ ಬಿದ್ದು ಹೋಗಿದ್ದಾರೆ. ಒಬ್ಬನು ಇದ್ದಾನೆ, ಮತ್ತೊಬ್ಬನು ಇನ್ನೂ ಬಂದಿಲ್ಲ. ಬಂದ ಮೇಲೆ ಅವನು ಸ್ವಲ್ಪಕಾಲ ಇರಲೇ ಬೇಕು.

11ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯವನು; ಅವನು ಆ ಏಳು ಮಂದಿಗೆ ಸೇರಿದವನಾಗಿದ್ದು ನಾಶನಕ್ಕೆ ಹೋಗುತ್ತಾನೆ.

12ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.

13ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ.

14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.

ಪ್ರಕಟನೆ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी