ಆಗ ದಾನಿಯೇಲನು ಒಳಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.
14ಆ ಮೇಲೆ ಬಾಬೆಲಿನ ಜ್ಞಾನಿಗಳನ್ನು ಕೊಲ್ಲಲ್ಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಆಲೋಚನೆ ಯಿಂದಲೂ ಜ್ಞಾನದಿಂದಲೂ ಉತ್ತರಕೊಟ್ಟನು;
15ಆಗ ದಾನಿಯೇಲನು ಅರಸನ ಅಧಿಪತಿಯಾದ ಅರ್ಯೋಕ ನಿಗೆ ಪ್ರತ್ಯುತ್ತರವಾಗಿ--ಅರಸನಿಂದ ಈ ನಿರ್ಣಯವು ಇಷ್ಟು ತೀಕ್ಷ್ಣವಾದದ್ದೇನು ಎಂದು ಕೇಳಲು ಅರ್ಯೋ ಕನು ದಾನಿಯೇಲನಿಗೆ ಆ ಸಂಗತಿಯ ವಿಷಯ ವಿವರಿ ಸಿದನು.
16ಆಗ ದಾನಿಯೇಲನು ಒಳಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.
17ಆ ಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ವಿಾಶಾಯೇಲ, ಅಜ ರ್ಯರಿಗೆ ಈ ಸಂಗತಿಯನ್ನು ತಿಳಿಸಿದನು.
18ದಾನಿಯೇ ಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬೆಲಿನ ಜ್ಞಾನಿಗಳ ಸಂಗಡ ನಾಶವಾಗದೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ