ಇಬ್ರಿಯರಿಗೆ 11:33

ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 11

31ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.

32ಇನ್ನೂ ಏನು ಹೇಳಬೇಕು? ಗಿಡಿಯೋನ್‌ ಬಾರಾಕ್‌ ಸಂಸೋನ್‌ ಎಫ್‌ಥ ದಾವೀದ್‌ ಸಮುವೇಲ್‌ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.

33ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.

34ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.

35ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.

ಇಬ್ರಿಯರಿಗೆ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी