ಯೆಶಾಯ 46:9

ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ.

ಸಂದರ್ಭದೊಂದಿಗೆ ಓದಿ · ಯೆಶಾಯ 46

7ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.

8ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ನಿಮ್ಮನ್ನು ಮನುಷ್ಯರೆಂದು ತೋರಿಸಿರಿ, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ;

9ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ.

10ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.

11ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.

ಯೆಶಾಯ 46 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी