ಯೆರೆಮಿಯ 2:19

ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 2

17ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?

18ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ?

19ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.

20ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.

21ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?

ಯೆರೆಮಿಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी