ಮತ್ತಾಯನು 17:17

ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 17

15ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು; ಯಾಕಂದರೆ ಅವನು ಚಂದ್ರರೋಗ ದಿಂದ ಬಹಳವಾಗಿ ಕಷ್ಟಪಡುತ್ತಾನೆ, ಅನೇಕಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.

16ನಾನು ಅವನನ್ನು ನಿನ್ನ ಶಿಷ್ಯರ ಬಳಿಗೆ ಕರೆತಂದೆನು; ಅವರು ಅವನನ್ನು ಸ್ವಸ್ಥಮಾಡಲಾರದೆ ಹೋದರು ಎಂದು ಹೇಳಿದನು.

17ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.

18ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಅವನೊಳಗಿಂದ ಹೊರಟುಹೋಯಿತು; ಆಗ ಹುಡುಗನು ಆ ಗಳಿಗೆಯಲ್ಲಿಯೇ ಸ್ವಸ್ಥನಾದನು.

19ತರುವಾಯ ಶಿಷ್ಯರು ವಿಂಗಡವಾಗಿ ಯೇಸುವಿನ ಬಳಿಗೆ ಬಂದು--ಅದನ್ನು ಬಿಡಿಸುವದಕ್ಕೆ ನಮಗೆ ಯಾಕೆ ಆಗಲಿಲ್ಲ ಎಂದು ಕೇಳಿದರು.

ಮತ್ತಾಯನು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी