ಯೆರೆಮಿಯ 49:16

ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 49

14ಕರ್ತನಿಂದ ನಾನು ಸುದ್ದಿಯನ್ನು ಕೇಳಿದ್ದೇನೆ; ಅನ್ಯಜನಾಂಗಗಳೊಳಗೆ ರಾಯಭಾರಿಯು ಕಳುಹಿಸಲ್ಪಟ್ಟಿದ್ದಾನೆ; ನೀವು ಒಟ್ಟು ಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ.

15ಇಗೋ, ನಿನ್ನನ್ನು ಅನ್ಯಜನಾಂಗ ಗಳಲ್ಲಿ ಹೀನವಾಗಿಯೂ ಮನುಷ್ಯರಲ್ಲಿ ತಿರಸ್ಕರಿಸಲ್ಪಟ್ಟವ ನನ್ನಾಗಿಯೂ ಮಾಡುವೆನು.

16ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ.

17ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.

18ಸೊದೋಮ್‌ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 49 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी