ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.
2ಪರಲೋಕ ರಾಜ್ಯವು ತನ್ನ ಮಗನ ಮದುವೆ ಮಾಡಿದ ಒಬ್ಬಾನೊಬ್ಬ ಅರಸನಿಗೆ ಹೋಲಿಕೆಯಾಗಿದೆ.
3ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು.
4ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.
5ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು.
6ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ