ಯೆಹೋಶುವ 17:3

ಆದರೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾ ದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರರಿಲ್ಲ; ಆದರೆ ಮಹ್ಲಾ, ನೋವಾ, ಹೋಗ್ಲಾ, ಮಿಲ್ಕಾ, ತಿರ್ಚಾ ಎಂಬ ಹೆಸರುಳ್ಳ ಕುಮಾರ್ತೆ ಯರಿದ್ದರು.

ಸಂದರ್ಭದೊಂದಿಗೆ ಓದಿ · ಯೆಹೋಶುವ 17

1ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗಸಿಕ್ಕಿತು. ಯಾಕಂದರೆ ಅವನು ಯೋಸೇಫ ನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗನಾದ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದದರಿಂದ ಗಿಲ್ಯಾದು ಬಾಷಾನು ಅವನ ಪಾಲಿಗೆ ಬಂದವು;

2ಮನಸ್ಸೆಯ ಉಳಿದ ಮಕ್ಕಳಾದ ಅಬೀಯೇಜೆರಿನ ಮಕ್ಕಳಿಗೂ ಹೇಲೆಕನ ಮಕ್ಕಳಿಗೂ ಅಸ್ರೀಯೇಲನ ಮಕ್ಕಳಿಗೂ ಶೆಕೆಮನ ಮಕ್ಕಳಿಗೂ ಹೇಫೆರನ ಮಕ್ಕಳಿಗೂ ಶೆವಿಾದನನ ಮಕ್ಕಳಿಗೂ ಅವರ ಕುಟುಂಬಗಳಿಗೆ ತಕ್ಕ ಬಾಧ್ಯತೆ ಉಂಟಾಯಿತು. ಇವರು ತಮ್ಮ ಕುಟುಂಬಗಳ ಪ್ರಕಾರ ಯೋಸೇಫನ ಮಗ ನಾದ ಮನಸ್ಸೆಯ ಗಂಡು ಮಕ್ಕಳಾಗಿದ್ದವರು.

3ಆದರೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾ ದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರರಿಲ್ಲ; ಆದರೆ ಮಹ್ಲಾ, ನೋವಾ, ಹೋಗ್ಲಾ, ಮಿಲ್ಕಾ, ತಿರ್ಚಾ ಎಂಬ ಹೆಸರುಳ್ಳ ಕುಮಾರ್ತೆ ಯರಿದ್ದರು.

4ಇವರು ಯಾಜಕನಾದ ಎಲ್ಲಾಜಾರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆನಮ್ಮ ಸಹೋದರರಲ್ಲಿ ನಮಗೆ ಬಾಧ್ಯತೆಯನ್ನು ಕೊಡು ವಂತೆ ಕರ್ತನು ಮೋಶೆಗೆ ಆಜ್ಞಾಪಿಸಿದನು ಅಂದರು. ಆದದರಿಂದ ಅವರ ತಂದೆಗಳ ಸಹೋದರರ ಮಧ್ಯ ದಲ್ಲಿ ಅವರಿಗೆ ಕರ್ತನ ವಾಕ್ಯದ ಹಾಗೆಯೇ ಬಾಧ್ಯತೆ ಯನ್ನು ಕೊಟ್ಟನು.

5ಯೊರ್ದನಿಗೆ ಆಚೆಯಲ್ಲಿರುವ ಗಿಲ್ಯಾದೂ ಬಾಷಾನೂ ಎಂಬ ದೇಶಗಳ ಹೊರತು ಮನಸ್ಸೆಗೆ ಚೀಟಿನಲ್ಲಿ ಬಿದ್ದ ದೇಶ ಹತ್ತು ಪಾಲು ಸಿಕ್ಕಿದವು.

ಯೆಹೋಶುವ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी