ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ.
24ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಇವರು ಎರಡು ಒಡಂಬಡಿಕೆಗಳೆ, ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದ್ದು; ಅದೇ ಹಾಗರ್.
25ಹಾಗರ್ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.
26ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ.
27ಯಾಕಂದರೆ--ಬಂಜೆಯೇ, ಹೆರದವಳೇ, ಸಂತೋಷಿಸು; ಪ್ರಸವ ವೇದನೆ ಪಡದವಳೇ, ಸ್ವರವೆತ್ತಿ ಕೂಗು; ಯಾಕಂದರೆ ಗಂಡನುಳ್ಳವಳಿಗಿಂತ ಬಿಡಲ್ಪಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆಂದು ಬರೆದದೆ.
28ಸಹೋದರರೇ, ನಾವು ಈಗ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ