೨ ಅರಸುಗಳು 25:16

ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ್ದ ಎರಡು ಸ್ತಂಭಗಳೂ ಸಮುದ್ರವೆನಿಸಿಕೊಂಡ ಪಾತ್ರೆಯೂ ಆಧಾರಗಳೂ ಈ ಎಲ್ಲಾ ಸಾಮಾನುಗಳ ತಾಮ್ರವು ತೂಕ ಮಾಡ ಲಾರದಷ್ಟಿತ್ತು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 25

14ಮಡಕೆಗಳನ್ನೂ ಸಲಿಕೆ ಗಳನ್ನೂ ಕತ್ತರಿಗಳನ್ನೂ ಸೌಟುಗಳನ್ನೂ ಅವರು ಸೇವಿಸುತ್ತಿದ್ದ ಎಲ್ಲಾ ಹಿತ್ತಾಳೆಯ ಸಾಮಾನುಗಳನ್ನೂ ತಕ್ಕೊಂಡು ಹೋದರು.

15ಕಾವಲುಗಾರರ ಅಧಿಪತಿಯು ಅಗ್ನಿಪಾತ್ರೆಗಳನ್ನೂ ತಟ್ಟೆಗಳನ್ನೂ ಬಂಗಾರ ದವುಗಳಾದ ಬಂಗಾರವನ್ನೂ ಬೆಳ್ಳಿಯವುಗಳಾದ ಬೆಳ್ಳಿ ಯನ್ನೂ ತಕ್ಕೊಂಡನು.

16ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ್ದ ಎರಡು ಸ್ತಂಭಗಳೂ ಸಮುದ್ರವೆನಿಸಿಕೊಂಡ ಪಾತ್ರೆಯೂ ಆಧಾರಗಳೂ ಈ ಎಲ್ಲಾ ಸಾಮಾನುಗಳ ತಾಮ್ರವು ತೂಕ ಮಾಡ ಲಾರದಷ್ಟಿತ್ತು.

17ಒಂದು ಸ್ತಂಭವು ಹದಿನೆಂಟು ಮೊಳ ಎತ್ತರವಾಗಿತ್ತು. ಅದರ ಮೇಲಿದ್ದ ಬೋದಿಗೆ ತಾಮ್ರ ದ್ದಾಗಿ ಮೂರು ಮೊಳ ಉದ್ದವಾಗಿತ್ತು. ಬೋದಿಗೆಯ ಸುತ್ತಲಿದ್ದ ಹೆಣೆತದ ಕೆಲಸವೂ ದಾಳಿಂಬರಗಳೂ ಎಲ್ಲಾ ತಾಮ್ರವಾಗಿತ್ತು. ಎರಡನೇ ಸ್ತಂಭಕ್ಕೆ ಇದರ ಹಾಗೆಯೇ ಹೆಣೆತದ ಕೆಲಸ ಉಂಟಾಗಿತ್ತು.

18ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.

೨ ಅರಸುಗಳು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी