ಸೊಲೊಮೋನನಿಗೆ ತನ್ನ ರಥಗಳಿಗೋಸ್ಕರ ನಾಲ್ವತ್ತು ಸಾವಿರ ಜೋಡಿ ಕುದುರೆಗಳೂ ಹನ್ನೆರಡು ಸಾವಿರ ರಾಹುತರೂ ಇದ್ದರು.
24ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು.
25ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೆಲಿನಲ್ಲಿರುವ ಪ್ರತಿ ಮನು ಷ್ಯನು ತನ್ನ ದ್ರಾಕ್ಷೇ ಗಿಡದ ಕೆಳಗೂ ತನ್ನ ಅಂಜೂರ ಗಿಡದ ಕೆಳಗೂ ಭರವಸದಿಂದ ವಾಸವಾಗಿದ್ದನು.
26ಸೊಲೊಮೋನನಿಗೆ ತನ್ನ ರಥಗಳಿಗೋಸ್ಕರ ನಾಲ್ವತ್ತು ಸಾವಿರ ಜೋಡಿ ಕುದುರೆಗಳೂ ಹನ್ನೆರಡು ಸಾವಿರ ರಾಹುತರೂ ಇದ್ದರು.
27ಆ ಅಧಿಕಾರಿಗಳಲ್ಲಿ ಪ್ರತಿ ಯೊಬ್ಬನು ತನ್ನ ತನ್ನ ತಿಂಗಳಿನ ವಂತಿನ ಪ್ರಕಾರ ಅರಸನಾದ ಸೊಲೊಮೋನನ ಮೇಜಿಗೆ ಬರುವವ ರೆಲ್ಲರಿಗೂ ಆಹಾರ ಪದಾರ್ಥವನ್ನು ಒದಗಿಸಿಕೊಡು ತ್ತಿದ್ದನು. ಯಾವದರಲ್ಲಿಯೂ ಅವರಿಗೆ ಕೊರತೆಯಾಗ ಲಿಲ್ಲ.
28ಹೀಗೆಯೇ ಪ್ರತಿ ಮನುಷ್ಯನು ತನ್ನ ವಂತಿನ ಪ್ರಕಾರ ಕುದುರೆಗಳಿಗೋಸ್ಕರವೂ ಸವಾರಿ ಒಂಟೆಗಳಿ ಗೋಸ್ಕರವೂ ಅವುಗಳ ಸ್ಥಳಕ್ಕೆ ಜವೆಗೋಧಿಯನ್ನೂ ಹುಲ್ಲನ್ನೂ ತಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ