ಅರಣ್ಯಕಾಂಡ 4:34

ಆಗ ಮೋಶೆಯೂ ಆರೋನನೂ ಸಭೆಯ ಮುಖ್ಯಸ್ಥರೂ ಕೆಹಾತಿಯರ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 4

32ಸುತ್ತಲಿರುವ ಅಂಗಳದ ಕಂಬಗಳೂ ಕುಣಿಕೆಗಳೂ ಗೂಟಗಳೂ ಅವುಗಳ ಹಗ್ಗಗಳೂ ಎಲ್ಲಾ ವಸ್ತುಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯ ವಸ್ತುಗಳನ್ನು ನೀವು ಹೆಸರೆಸರಾಗಿ ಎಣಿಸ ಬೇಕು.

33ಮೆರಾರೀಯ ಕುಮಾರರ ಕುಟುಂಬಗಳ ಸೇವೆಯೂ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೇ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.

34ಆಗ ಮೋಶೆಯೂ ಆರೋನನೂ ಸಭೆಯ ಮುಖ್ಯಸ್ಥರೂ ಕೆಹಾತಿಯರ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ

35ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು ಎಣಿಸಿ ದರು.

36ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪ ಟ್ಟವರು ಎರಡು ಸಾವಿರದ ಏಳು ನೂರ ಐವತ್ತು ಮಂದಿಯಾಗಿದ್ದರು.

ಅರಣ್ಯಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी