ಆದದರಿಂದ ಬಿತ್ತುವವನ ಸಾಮ್ಯದ ವಿಷಯವಾಗಿ ನೀವು ಕೇಳಿರಿ:
16ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ.
17ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.
18ಆದದರಿಂದ ಬಿತ್ತುವವನ ಸಾಮ್ಯದ ವಿಷಯವಾಗಿ ನೀವು ಕೇಳಿರಿ:
19ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
20ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ