ಯೆರೆಮಿಯ 6:21

ಆದದರಿಂದ ಕರ್ತನು ಹೀಗೆ ಹೇಳುತ್ತಾನೆ. ಇಗೋ, ನಾನು ಈ ಜನರ ಮುಂದೆ ಎಡೆತಡೆಗಳನ್ನು ಇಡುತ್ತೇನೆ; ತಂದೆ ಗಳೂ ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು; ನೆರೆಯವನೂ ಅವನ ಸ್ನೇಹಿತನೂ ನಾಶವಾಗುವನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 6

19ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.

20ಶೇಬದಿಂದ ಸಾಂಬ್ರಾಣಿಯೂ ದೂರ ದೇಶದಿಂದ ಒಳ್ಳೇ ಸುಗಂಧವೂ ನನಗೆ ಬರುವದು ಯಾತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚಿಕೆಯಾಗಲಿಲ್ಲ; ನಿಮ್ಮ ಬಲಿಗಳು ನನಗೆ ರುಚಿ ಇಲ್ಲ.

21ಆದದರಿಂದ ಕರ್ತನು ಹೀಗೆ ಹೇಳುತ್ತಾನೆ. ಇಗೋ, ನಾನು ಈ ಜನರ ಮುಂದೆ ಎಡೆತಡೆಗಳನ್ನು ಇಡುತ್ತೇನೆ; ತಂದೆ ಗಳೂ ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು; ನೆರೆಯವನೂ ಅವನ ಸ್ನೇಹಿತನೂ ನಾಶವಾಗುವನು.

22ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.

23ಅವರು ಬಿಲ್ಲನ್ನೂ ಬಲ್ಲೆಯನ್ನೂ ಹಿಡಿದ ಕ್ರೂರಿಗಳಾಗಿದ್ದಾರೆ, ಕನಿಕರ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುತ್ತದೆ; ಕುದುರೆ ಗಳ ಮೇಲೆ ಸವಾರಿ ಮಾಡುತ್ತಾರೆ; ಚೀಯೋನಿನ ಕುಮಾರಿಯೇ, ನಿನಗೆ ವಿರೋಧವಾಗಿ ಯುದ್ದ ಮಾಡುವ ಮನುಷ್ಯರಂತೆ ಸಿದ್ಧಮಾಡಿಕೊಂಡಿದ್ದಾರೆ;

ಯೆರೆಮಿಯ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी