ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆ ಮಾಡುತ್ತೇವೆಂದು ಒಳ್ಳೇ ಮನಸ್ಸಿನಿಂದ ಸೇವೆಮಾಡಿರಿ.
5ಸೇವಕರೇ, ಶಾರೀರಕ್ಕನುಸಾರವಾಗಿ ನಿಮ್ಮ ಯಜ ಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಹೃದಯ ಪೂರ್ವಕವಾಗಿ ನಡುಗುತ್ತಾ ವಿಧೇಯರಾಗಿರ್ರಿ.
6ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ.
7ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆ ಮಾಡುತ್ತೇವೆಂದು ಒಳ್ಳೇ ಮನಸ್ಸಿನಿಂದ ಸೇವೆಮಾಡಿರಿ.
8ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬದನ್ನು ನೀವು ತಿಳಿದವರಾಗಿಯೇ ಇದ್ದೀರಿ.
9ಯಜಮಾನರೇ, ನೀವು ಅದೇ ರೀತಿಯಾಗಿ ಮಾಡಿರಿ. ಪರಲೋಕದಲ್ಲಿ ನಿಮ್ಮ ಯಜಮಾನನಾಗಿರು ವಾತನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವದನ್ನು ಬಿಟ್ಟುಬಿಡಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ