ವಿಮೋಚನಕಾಂಡ 28:5

ಅವರು ಬಂಗಾರವನ್ನೂ ನೀಲಿ ಧೂಮ್ರ ರಕ್ತವರ್ಣದ ನೂಲನ್ನೂ ನಯವಾದ ನಾರು ಮಡಿಯನ್ನೂ ತಕ್ಕೊಳ್ಳಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 28

3ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು.

4ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು.

5ಅವರು ಬಂಗಾರವನ್ನೂ ನೀಲಿ ಧೂಮ್ರ ರಕ್ತವರ್ಣದ ನೂಲನ್ನೂ ನಯವಾದ ನಾರು ಮಡಿಯನ್ನೂ ತಕ್ಕೊಳ್ಳಬೇಕು.

6ಎಫೋದನ್ನು ಬಂಗಾರದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಕುಶಲ ಕಲೆಯಿಂದಲೂ ಮಾಡಬೇಕು.

7ಅದರ ಎರಡೂ ಅಂಚುಗಳಲ್ಲಿ ಜೋಡಿಸುವದಕ್ಕೆ ಅದಕ್ಕೆ ಎರಡು ಹೆಗಲು ಭಾಗಗಳಿರಬೇಕು, ಅವು ಜೋಡಿಸಲ್ಪಡಬೇಕು.

ವಿಮೋಚನಕಾಂಡ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी