ಪ್ರಸಂಗಿ 3:17

ನಾನು ನನ್ನ ಹೃದಯದಲ್ಲಿ -- ನೀತಿವಂತರನ್ನೂ ದುಷ್ಟರನ್ನೂ ದೇವರು ತೀರ್ಪುಮಾಡುವನು; ಪ್ರತಿಯೊಂದು ಉದ್ದೇ ಶಕ್ಕೂ ಪ್ರತಿಯೊಂದು ಕೆಲಸಕ್ಕೂ ಸಮಯವಿದೆ ಎಂದು ಅಂದುಕೊಂಡೆನು.

ಸಂದರ್ಭದೊಂದಿಗೆ ಓದಿ · ಪ್ರಸಂಗಿ 3

15ಇದ್ದದ್ದು ಈಗ ಇದೆ, ಇರುವದು ಆಗಲೇ ಇತ್ತು; ಗತಿಸಿಹೋದದ್ದನ್ನು ದೇವರು ಕೇಳುತ್ತಾನೆ.

16ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.

17ನಾನು ನನ್ನ ಹೃದಯದಲ್ಲಿ -- ನೀತಿವಂತರನ್ನೂ ದುಷ್ಟರನ್ನೂ ದೇವರು ತೀರ್ಪುಮಾಡುವನು; ಪ್ರತಿಯೊಂದು ಉದ್ದೇ ಶಕ್ಕೂ ಪ್ರತಿಯೊಂದು ಕೆಲಸಕ್ಕೂ ಸಮಯವಿದೆ ಎಂದು ಅಂದುಕೊಂಡೆನು.

18ಮನುಷ್ಯ ಪುತ್ರರ ಸ್ಥಿತಿಯ ವಿಷ ಯವಾಗಿ ದೇವರು ಅವರನ್ನು ಪ್ರತ್ಯಕ್ಷಪಡಿಸುವನೆಂದೂ ಅವರು ತಾವೇ ಮೃಗಗಳೆಂದು ತಾವು ಕಂಡುಕೊಳ್ಳ ಬೇಕೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.

19ಮೃಗಗಳಿಗೆ ಸಂಭವಿಸುವದು ಮನುಷ್ಯರ ಪುತ್ರರಿಗೂ ಸಂಭವಿಸುತ್ತದೆ; ಅವರಿಗೆ ಒಂದೇ ಸಂಗತಿ ಸಂಭವಿಸು ತ್ತದೆ; ಒಂದು ಸಾಯುವ ಹಾಗೆ ಮತ್ತೊಂದು ಸಾಯು ತ್ತದೆ; ಹೌದು, ಅವರೆಲ್ಲರಿಗೂ ಒಂದೇ ಒಂದು ಉಸಿ ರಾಟ ಇದೆ; ಆದಕಾರಣ ಮೃಗಕ್ಕಿಂತ ಮನುಷ್ಯನಿಗೆ ಯಾವ ಶ್ರೇಷ್ಠತೆಯೂ ಇಲ್ಲ; ಎಲ್ಲವೂ ವ್ಯರ್ಥ.

ಪ್ರಸಂಗಿ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी