ಎಸ್ತೇರಳು 4:14

ನೀನು ಈ ಕಾಲದಲ್ಲಿ ಮೌನವಾಗಿಯೇ ಇದ್ದರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ವಿಶ್ರಾಂತಿಯೂ ಬಿಡುಗಡೆಯೂ ಉಂಟಾಗುವವು; ಆದರೆ ನೀನೂ ನಿನ್ನ ತಂದೆಯ ಮನೆಯೂ ನಾಶವಾಗಿ ಹೋಗುವಿರಿ. ಇಂಥಾ ಕಾಲ ಕ್ಕೋಸ್ಕರ ನೀನು ರಾಜತ್ವಕ್ಕೆ ಬಂದಿ ಏನೋ ತಿಳಿದ ವರು ಯಾರು ಅಂದನು.

ಸಂದರ್ಭದೊಂದಿಗೆ ಓದಿ · ಎಸ್ತೇರಳು 4

12ಅವರು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದರು.

13ಆಗ ಮೊರ್ದೆಕೈ ಎಸ್ತೇರಳಿಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ--ನೀನು ಅರಮನೆಯಲ್ಲಿರುವ ದರಿಂದ ಸಮಸ್ತ ಯೆಹೂದ್ಯರಲ್ಲಿ ತಪ್ಪಿಸಿಕೊಳ್ಳುವೆ ನೆಂದು ನೆನಸಬೇಡ.

14ನೀನು ಈ ಕಾಲದಲ್ಲಿ ಮೌನವಾಗಿಯೇ ಇದ್ದರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ವಿಶ್ರಾಂತಿಯೂ ಬಿಡುಗಡೆಯೂ ಉಂಟಾಗುವವು; ಆದರೆ ನೀನೂ ನಿನ್ನ ತಂದೆಯ ಮನೆಯೂ ನಾಶವಾಗಿ ಹೋಗುವಿರಿ. ಇಂಥಾ ಕಾಲ ಕ್ಕೋಸ್ಕರ ನೀನು ರಾಜತ್ವಕ್ಕೆ ಬಂದಿ ಏನೋ ತಿಳಿದ ವರು ಯಾರು ಅಂದನು.

15ಎಸ್ತೇರಳು ಮೊರ್ದೆಕೈಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ -- ನೀನು ಹೋಗಿ ಶೂಷನಿನಲ್ಲಿರುವ ಸಮಸ್ತ ಯೆಹೂದ್ಯರನ್ನು ಕೂಡಿಸಿ ನನಗೋಸ್ಕರ ರಾತ್ರಿ ಹಗಲೂ ಮೂರು ದಿವಸ ತಿನ್ನದೆಯೂ ಕುಡಿಯದೆಯೂ ಉಪವಾಸ ಮಾಡಿರಿ.

16ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.

ಎಸ್ತೇರಳು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी