ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
1ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ.
2ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
3ಸ್ತುತಿಸತಕ್ಕ ಕರ್ತನಿಗೆ ನಾನು ಮೊರೆಯಿಡುತ್ತೇನೆ; ಹೀಗೆ ನಾನು ನನ್ನ ಶತ್ರುಗಳೊಳಗಿಂದ ರಕ್ಷಿಸಲ್ಪಡುತ್ತೇನೆ.
4ಮರಣದ ದುಃಖಗಳು ನನ್ನನ್ನು ಆವರಿಸಿಕೊಂಡವು, ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ