ಆದಿಕಾಂಡ 12:6

ಅಬ್ರಾಮನು ಆ ದೇಶದಲ್ಲಿ ಶೆಕೆಮ್‌ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 12

4ಹೀಗೆ ಕರ್ತನು ತನಗೆ ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನಿ ನಿಂದ ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು.

5ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್‌ ದೇಶಕ್ಕೆ ಹೊರಟು ಅವರು ಕಾನಾನ್‌ ದೇಶಕ್ಕೆ ಬಂದರು.

6ಅಬ್ರಾಮನು ಆ ದೇಶದಲ್ಲಿ ಶೆಕೆಮ್‌ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು.

7ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.

8ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.

ಆದಿಕಾಂಡ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी