ಆದಿಕಾಂಡ 45:5

ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.

ಸಂದರ್ಭದೊಂದಿಗೆ ಓದಿ · ಆದಿಕಾಂಡ 45

3ಯೋಸೇಫನು ತನ್ನ ಸಹೋದರರಿಗೆ--ನಾನು ಯೋಸೇಫನು, ನನ್ನ ತಂದೆಯು ಇನ್ನೂ ಬದುಕಿ ದ್ದಾನೋ ಅಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ ಅವನಿಗೆ ಉತ್ತರ ಕೊಡಲಾರದೆ ಹೋದರು.

4ಆಗ ಯೋಸೇಫನು ತನ್ನ ಸಹೋದರರಿಗೆ--ನನ್ನ ಬಳಿಗೆ ಬನ್ನಿರಿ ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು--ನೀವು ಐಗುಪ್ತಕ್ಕೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ.

5ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.

6ಈ ಎರಡು ವರುಷಗಳ ವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರುಷಗಳ ವರೆಗೆ ಬಿತ್ತುವದೂ ಕೊಯ್ಯುವದೂ ಇರುವದಿಲ್ಲ.

7ಆದದ ರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವ ದಕ್ಕೂ ದೊಡ್ಡ ಬಿಡುಗಡೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸುವದಕ್ಕೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.

ಆದಿಕಾಂಡ 45 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी