ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
12ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
13ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.
14ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
15ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
16ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ