ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
14ಆದದರಿಂದ ಇನ್ನು ಮುಂದೆ ನೀನು ಮನುಷ್ಯರನ್ನು ನುಂಗುವದಿಲ್ಲ; ಇನ್ನು ಮೇಲೆ ನಿನ್ನ ಜನಾಂಗದವರನ್ನು ಮಕ್ಕಳಿಲ್ಲದವ ರನ್ನಾಗಿ ಮಾಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
15ಅಲ್ಲದೆ ಇನ್ನು ಮೇಲೆ ನೀನು ಅನ್ಯ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗದವರಿಂದ ತಿರಸ್ಕರಿಸಲ್ಪಡುವದಿಲ್ಲ; ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
16ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
17ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲ್ಯರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧ ಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.
18ಆದದರಿಂದ ಅವರು ದೇಶದಲ್ಲಿ ಚೆಲ್ಲಿದ ರಕ್ತದ ನಿಮಿತ್ತವಾಗಿಯೂ ಅವರು ಅದನ್ನು ಅಶುದ್ಧಪಡಿಸಿದ ಅವರ ವಿಗ್ರಹಗಳ ನಿಮಿತ್ತವಾಗಿಯೂ ನನ್ನ ರೋಷ ವನ್ನು ಅವರ ಮೇಲೆ ಸುರಿಸಿದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ