ಕರ್ತನೇ, ನಮಗೆ ಸಮಾಧಾನ ವನ್ನು ವಿಧಿಸುವಿ. ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀ.
10ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾ ಯವನ್ನಾಚರಿಸುವನು ಮತ್ತು ಕರ್ತನ ಮಹತ್ವವನ್ನು ಲಕ್ಷಿಸುವದಿಲ್ಲ.
11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
12ಕರ್ತನೇ, ನಮಗೆ ಸಮಾಧಾನ ವನ್ನು ವಿಧಿಸುವಿ. ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀ.
13ಓ ಕರ್ತನೇ, ನಮ್ಮ ದೇವರೇ, ನಿನ್ನ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿನ್ನಿಂದ ಮಾತ್ರವೇ ನಿನ್ನ ನಾಮವನ್ನು ನಾವು ಜ್ಞಾಪಿಸಿ ಕೊಳ್ಳುವಂತಾಯಿತು.
14ಅವರು ಸತ್ತರು ಬದುಕುವ ದಿಲ್ಲ; ಆದ್ದರಿಂದ ನೀನು ಅವರನ್ನು ಸಂದರ್ಶಿಸಿ ನಾಶ ಮಾಡಿ ಅವರ ಎಲ್ಲಾ ಜ್ಞಾಪಕಗಳನ್ನು ಅಳಿಸಿಬಿಟ್ಟಿದ್ದೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ