೨ ಸಮುವೇಲನು 17:20

ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು--ಅಹೀಮಾ ಚನೂ ಯೋನಾತಾನನೂ ಎಲ್ಲಿ ಎಂದು ಕೇಳಿದಾಗ ಅವಳು ಅವರಿಗೆ--ಹಳ್ಳವನ್ನು ದಾಟಿಹೋದರು ಅಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂತಿರುಗಿದರು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 17

18ಆದರೆ ಒಬ್ಬ ಹುಡುಗನು ಅವರನ್ನು ನೋಡಿ ಅಬ್ಷಾ ಲೋಮನಿಗೆ ತಿಳಿಸಿದನು. ಆದದರಿಂದ ಅವರಿಬ್ಬರು ಶೀಘ್ರವಾಗಿ ಹೋಗಿ ಬಹುರೀಮಿನಲ್ಲಿರುವ ಒಬ್ಬ ಮನುಷ್ಯನ ಮನೆಯಲ್ಲಿ ಪ್ರವೇಶಿಸಿ ಅವನ ಅಂಗಳ ದಲ್ಲಿರುವ ಬಾವಿಯಲ್ಲಿ ಇಳಿದರು.

19ಆಗ ಆ ಮನೆ ಯವಳು ಬಾವಿಯ ಮೇಲೆ ಒಂದು ವಸ್ತ್ರವನ್ನು ಹಾಸಿ ನುಚ್ಚನ್ನು ಹರವಿಬಿಟ್ಟಳು. ಆದದರಿಂದ ಕಾರ್ಯ ತಿಳಿ ಯದೆ ಹೋಯಿತು.

20ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು--ಅಹೀಮಾ ಚನೂ ಯೋನಾತಾನನೂ ಎಲ್ಲಿ ಎಂದು ಕೇಳಿದಾಗ ಅವಳು ಅವರಿಗೆ--ಹಳ್ಳವನ್ನು ದಾಟಿಹೋದರು ಅಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂತಿರುಗಿದರು.

21ಆದರೆ ಇವರು ಹೋದ ತರುವಾಯ ಅವರು ಬಾವಿಯೊಳಗಿಂದ ಏರಿ ಹೋಗಿ ಅರಸನಾದ ದಾವೀದನಿಗೆ--ನೀನು ಶೀಘ್ರ ವಾಗಿ ಎದ್ದು ಹೊಳೆ ದಾಟಿಹೋಗು; ಯಾಕಂದರೆ ಈ ಪ್ರಕಾರ ಅಹೀತೋಫೆಲನು ನಿನಗೆ ವಿರೋಧ ವಾಗಿ ಆಲೋಚನೆ ಹೇಳಿದನು ಅಂದರು.

22ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ಎದ್ದು ಯೊರ್ದನನ್ನು ದಾಟಿದರು. ಉದಯವಾಗುವ ದಕ್ಕಿಂತ ಮುಂಚೆ ಒಬ್ಬರಾದರೂ ಹಿಂದುಳಿದಿರಲಿಲ್ಲ.

೨ ಸಮುವೇಲನು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी