ಯಾಜಕಕಾಂಡ 13:30

ಆಗ ಯಾಜಕನು ಆ ವ್ಯಾಧಿಯನ್ನು ನೋಡಬೇಕು. ಇಗೋ, ಅದು ನೋಡುವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು; ಅದು ಒಣಗಿದ ಇಸಬಾಗಿರುವದು. ಅದು ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ಇರುವ ಕುಷ್ಠವಾಗಿದೆ.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 13

28ಆ ಹೊಳಪಾದ ಮಚ್ಚೆಯು ಅದೇ ಸ್ಥಳದಲ್ಲಿ ಉಳಿದಿದ್ದರೆ ಮತ್ತು ಚರ್ಮದಲ್ಲಿ ಹರಡದೆ ಸ್ವಲ್ಪ ಮೊಬ್ಬಾಗಿದ್ದರೆ ಅದು ಬೊಬ್ಬೆಯ ಊತವೆಂದು ಅವನು ಶುದ್ಧನೆಂದು ಯಾಜಕನು ನುಡಿಯಬೇಕು; ಅದು ಬೆಂಕಿಯ ಬೊಬ್ಬೆಯಾಗಿರುವದು.

29ಒಬ್ಬ ಪುರುಷನಿಗಾಗಲಿ ಸ್ತ್ರೀಗಾಗಲಿ ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ವ್ಯಾಧಿಯು ಇದ್ದರೆ

30ಆಗ ಯಾಜಕನು ಆ ವ್ಯಾಧಿಯನ್ನು ನೋಡಬೇಕು. ಇಗೋ, ಅದು ನೋಡುವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು; ಅದು ಒಣಗಿದ ಇಸಬಾಗಿರುವದು. ಅದು ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ಇರುವ ಕುಷ್ಠವಾಗಿದೆ.

31ಯಾಜಕನು ಈ ಇಸಬಿನ ವ್ಯಾಧಿಯನ್ನು ನೋಡಿದಾಗ ಇಗೋ, ಅದು ನೋಡಲು ಚರ್ಮಕ್ಕಿಂತಲೂ ಆಳವಾಗಿರದಿದ್ದರೆ ಮತ್ತು ಕಪ್ಪು ಕೂದಲು ಇರದಿದ್ದರೆ ಯಾಜಕನು ಆಗ ಆ ಇಸಬಿನ ವ್ಯಾಧಿಯವನನ್ನು ಏಳು ದಿನಗಳು ಮುಚ್ಚಿಡಬೇಕು.

32ಏಳನೇ ದಿನದಲ್ಲಿ ಯಾಜಕನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ಇಸಬು ಹರಡದೆ ಅದರಲ್ಲಿ ಹಳದಿ ಕೂದಲು ಇರದೆ ಆ ಇಸಬು ಚರ್ಮಕ್ಕಿಂತಲೂ ಆಳವಾಗಿ ಕಾಣದಿದ್ದರೆ

ಯಾಜಕಕಾಂಡ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी