ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು.
21ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.
22ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.
23ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು.
24ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
25ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ