ಯೋಹಾನನು 17:21

ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.

ಸಂದರ್ಭದೊಂದಿಗೆ ಓದಿ · ಯೋಹಾನನು 17

19ಅವರು ಸತ್ಯದಲ್ಲಿ ಪ್ರತಿಷ್ಠಿಸಲ್ಪಡುವಂತೆ ನಾನು ನನ್ನನ್ನು ಅವರಿ ಗೋಸ್ಕರ ಪ್ರತಿಷ್ಠಿಸಿಕೊಳ್ಳುತ್ತೇನೆ.

20ಆದರೆ ಇವರಿಗೊಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನ ಮೇಲೆ ನಂಬಿಕೆಯಿಡುವವರಿಗೋ ಸ್ಕರವೂ ಕೇಳಿಕೊಳ್ಳುತ್ತೇನೆ.

21ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.

22ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.

23ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು.

ಯೋಹಾನನು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी