೧ ಅರಸುಗಳು 20:31

ಆಗ ಅವನ ಸೇವಕರು ಅವನಿಗೆ -- ಇಗೋ, ಇಸ್ರಾಯೇಲಿನ ಮನೆಯ ಅರಸುಗಳು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ; ನಾವು ಗೋಣಿಯನ್ನು ನಡುವಿನಲ್ಲಿ ಕಟ್ಟಿ ಕೊಂಡು ಹಗ್ಗಗಳನ್ನು ನಮ್ಮ ತಲೆಗಳಲ್ಲಿ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ; ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು ಅಂದರು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 20

29ಏಳು ದಿವಸ ಇವರು ಅವರಿಗೆ ಎದುರಾಗಿ ದಂಡಿಳಿದಿದ್ದರು. ಆದರೆ ಏಳನೇ ದಿವಸದಲ್ಲಿ ಯುದ್ಧಕ್ಕೆ ಕೂಡಿದಾಗ ಇಸ್ರಾಯೇಲಿನ ಮಕ್ಕಳು ಅರಾಮ್ಯದಲ್ಲಿ ಲಕ್ಷ ಕಾಲ್ಬಲವನ್ನು ಒಂದೇ ದಿವಸದಲ್ಲಿ ಸಂಹರಿಸಿದರು.

30ಮಿಕ್ಕಾದವರು ಅಫೇಕ್‌ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.

31ಆಗ ಅವನ ಸೇವಕರು ಅವನಿಗೆ -- ಇಗೋ, ಇಸ್ರಾಯೇಲಿನ ಮನೆಯ ಅರಸುಗಳು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ; ನಾವು ಗೋಣಿಯನ್ನು ನಡುವಿನಲ್ಲಿ ಕಟ್ಟಿ ಕೊಂಡು ಹಗ್ಗಗಳನ್ನು ನಮ್ಮ ತಲೆಗಳಲ್ಲಿ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ; ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು ಅಂದರು.

32ಹಾಗೆಯೆ ಅವರು ಗೋಣಿಯನ್ನು ತಮ್ಮ ನಡುವುಗಳಲ್ಲಿ ಕಟ್ಟಿಕೊಂಡು ಹಗ್ಗಗಳನ್ನು ತಮ್ಮ ತಲೆ ಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು--ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ ಅಂದರು. ಅದಕ್ಕೆ ಅವನುಅವನು ಇನ್ನೂ ಬದುಕಿರುತ್ತಾನೋ? ಅವನು ನನ್ನ ಸಹೋದರನು ಅಂದನು.

33ಈಗ ಆ ಮನುಷ್ಯರು ಅವನ ಮಾತಿನಲ್ಲಿ ಏನಾದರೂ ಬಂದೀತೆಂದು ಜಾಗ್ರೆತೆ ಯಿಂದ ನೋಡಿಕೊಂಡು ಅದನ್ನು ಅವಸರದಿಂದ ಹಿಡಿದರು. ಅವರು--ನಿನ್ನ ಸಹೋದರನಾದ ಬೆನ್ಹದ ದನು ಎಂದು ಹೇಳಿದರು. ಆಗ ಅವನು--ನೀವು ಹೋಗಿ ಅವನನ್ನು ಕರೆತನ್ನಿರಿ ಅಂದನು. ಬೆನ್ಹದದನು ಅವನ ಬಳಿಗೆ ಬಂದಾಗ ಅವನು ಇವನನ್ನು ರಥದ ಲ್ಲೇರ ಮಾಡಿದನು.

೧ ಅರಸುಗಳು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी