ಯೋಹಾನನು 14:30

ಇನ್ನು ಮೇಲೆ ನಾನು ನಿಮ್ಮೊಂದಿಗೆ ಬಹಳವಾಗಿ ಮಾತನಾಡುವದಿಲ್ಲ; ಯಾಕಂದರೆ ಇಹ ಲೋಕದ ಅಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ನನ್ನಲ್ಲಿ ಏನೂ ಇಲ್ಲ.

ಸಂದರ್ಭದೊಂದಿಗೆ ಓದಿ · ಯೋಹಾನನು 14

28ನಾನು ಹೋಗಿ ತಿರಿಗಿ ನಿಮ್ಮ ಬಳಿಗೆ ಬರುವದು ಹೇಗೆ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ; ನೀವು ನನ್ನನ್ನು ಪ್ರೀತಿಸಿದ್ದರೆ ನಾನು ನನ್ನ ತಂದೆಯ ಬಳಿಗೆ ಹೊಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದಿರಿ; ನನ್ನ ತಂದೆಯು ನನಗಿಂತಲೂ ದೊಡ್ಡವನಾಗಿದ್ದಾನೆ.

29ಅದು ನಡೆಯುವಾಗ ನೀವು ನಂಬುವಂತೆ ನಡೆಯು ವದಕ್ಕಿಂತ ಮುಂಚೆಯೇ ಈಗ ನಾನು ನಿಮಗೆ ಹೇಳಿದ್ದೇನೆ.

30ಇನ್ನು ಮೇಲೆ ನಾನು ನಿಮ್ಮೊಂದಿಗೆ ಬಹಳವಾಗಿ ಮಾತನಾಡುವದಿಲ್ಲ; ಯಾಕಂದರೆ ಇಹ ಲೋಕದ ಅಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ನನ್ನಲ್ಲಿ ಏನೂ ಇಲ್ಲ.

31ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.

ಯೋಹಾನನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी