ಕರ್ತನ ದೂತನು ಆಕಾಶದೊಳಗಿಂದ ಎರಡ ನೆಯ ಸಾರಿ ಅಬ್ರಹಾಮನನ್ನು ಕರೆದನು.
13ಆಗ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ನೋಡಿದನು; ಇಗೋ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಆ ಟಗರನ್ನು ತೆಗೆದುಕೊಂಡು ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು.
14ಅಬ್ರಹಾಮನು ಆ ಸ್ಥಳಕ್ಕೆ ಯೆಹೋವಯಾರೆ ಎಂದು ಹೆಸರನ್ನು ಇಟ್ಟದ್ದರಿಂದ ಕರ್ತನ ಪರ್ವತದಲ್ಲಿ ಅದು ಕಾಣಲ್ಪಡುವದು ಎಂದು ಇಂದಿನ ವರೆಗೂ ಹೇಳುತ್ತಾರೆ.
15ಕರ್ತನ ದೂತನು ಆಕಾಶದೊಳಗಿಂದ ಎರಡ ನೆಯ ಸಾರಿ ಅಬ್ರಹಾಮನನ್ನು ಕರೆದನು.
16ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ
17ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ