ನೆಹೆಮಿಯ 5:5

ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು.

ಸಂದರ್ಭದೊಂದಿಗೆ ಓದಿ · ನೆಹೆಮಿಯ 5

3ಕೆಲವರು ಈ ಬರದಲ್ಲಿ ನಾವು ಧಾನ್ಯಕೊಂಡು ಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಮನೆಗಳನ್ನೂ ಒತ್ತೆ ಇಟ್ಟೆವು ಅಂದರು.

4ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ.

5ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು.

6ಅವರ ಕೂಗನ್ನೂ ಈ ಮಾತುಗಳನ್ನೂ ನಾನು ಕೇಳಿದಾಗ ಬಹಳ ಕೋಪಿಸಿಕೊಂಡೆನು.

7ಹೃದಯ ದಲ್ಲಿ ಯೋಚನೆ ಮಾಡಿಕೊಂಡು ಪ್ರಮುಖರನ್ನೂ ಅಧಿಕಾರಸ್ಥರನ್ನೂ ಗದರಿಸಿ ಅವರಿಗೆ--ನೀವು ಪ್ರತಿ ಮನುಷ್ಯನು ಅವನವನ ಸಹೋದರನಿಂದ ಬಡ್ಡಿಯನ್ನು ಒತ್ತಾಯದಿಂದ ತಕ್ಕೊಳ್ಳುತ್ತೀರಿ ಎಂದು ಹೇಳಿ ಅವರ ಮೇಲೆ ದೊಡ್ಡ ಸಭೆಯನ್ನು ನೇಮಿಸಿದನು.

ನೆಹೆಮಿಯ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी