ಆಗ ಆತನು ಅವರ ನಂಬಿಕೆಯನ್ನು ನೋಡಿ ಅವನಿಗೆ-- ಮನುಷ್ಯನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.
18ಆಗ ಇಗೋ, ಪಾರ್ಶ್ವವಾಯು ರೋಗವಿದ್ದ ಒಬ್ಬ ಮನುಷ್ಯನನ್ನು ಕೆಲವರು ಹಾಸಿಗೆಯಲ್ಲಿ ಹೊತ್ತು ಕೊಂಡು ಬಂದು ಅವನನ್ನು ಒಳಗೆ ಆತನ ಎದುರಿಗೆ ತರುವ ವಿಧಾನವನ್ನು ಹುಡುಕಿದರು.
19ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ ಮನೆಯಮೇಲೆ ಹೋಗಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ನಡುವೆ ಯೇಸುವಿನ ಮುಂದೆ ಇಳಿಸಿದರು.
20ಆಗ ಆತನು ಅವರ ನಂಬಿಕೆಯನ್ನು ನೋಡಿ ಅವನಿಗೆ-- ಮನುಷ್ಯನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.
21ಆಗ ಶಾಸ್ತ್ರಿಗಳೂ ಫರಿ ಸಾಯರೂ--ದೇವದೂಷಣೆಗಳನ್ನು ಮಾಡುವದಕ್ಕೆ ಇವನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು ಎಂದು ತಮ್ಮಲ್ಲಿ ಮಾತನಾಡಿಕೊಂಡರು.
22ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು ಪ್ರತ್ಯುತ್ತರವಾಗಿ ಅವರಿಗೆ--ನೀವು ನಿಮ್ಮ ಹೃದಯಗಳಲ್ಲಿ ಅಂದು ಕೊಳ್ಳುತ್ತಿರುವದೇನು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ