ಯಾಜಕಕಾಂಡ 22:3

ಅವರಿಗೆ ನೀನು ಹೀಗೆ ಹೇಳು--ನಿಮ್ಮ ಎಲ್ಲಾ ಸಂತತಿಯ ವಂಶಾವಳಿ ಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ ಅವನು ನನ್ನ ಸನ್ನಿಧಿ ಯಿಂದ ತೆಗೆದುಹಾಕಲ್ಪಡಬೇಕು; ನಾನೇ ಕರ್ತನು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 22

1ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ --

2ಆರೋನನೊಂದಿಗೂ ಅವನ ಕುಮಾರರೊಂದಿಗೂ ಮಾತನಾಡು; ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡದಂತೆ ಇಸ್ರಾಯೇಲ್‌ ಮಕ್ಕಳು ನನಗೆ ಸಲ್ಲಿಸುವ ಪರಿಶುದ್ಧವಾದವುಗಳಿಂದ ಅವರು ಪ್ರತ್ಯೇಕ ವಾಗಿರಬೇಕು; ನಾನೇ ಕರ್ತನು.

3ಅವರಿಗೆ ನೀನು ಹೀಗೆ ಹೇಳು--ನಿಮ್ಮ ಎಲ್ಲಾ ಸಂತತಿಯ ವಂಶಾವಳಿ ಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ ಅವನು ನನ್ನ ಸನ್ನಿಧಿ ಯಿಂದ ತೆಗೆದುಹಾಕಲ್ಪಡಬೇಕು; ನಾನೇ ಕರ್ತನು.

4ಆರೋನನ ಸಂತತಿಯವರಲ್ಲಿ ಒಬ್ಬನು ಕುಷ್ಠರೋಗಿ ಇಲ್ಲವೆ ಸ್ರಾವವುಳ್ಳವನಿದ್ದರೆ ಅವನು ಶುದ್ಧನಾಗುವ ವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು

5ಅಶುದ್ಧನಾಗಿ ಮಾಡಲ್ಪಡುವಂತೆ ಹರಿದಾಡುವ ಯಾವದನ್ನಾಗಲಿ ಇಲ್ಲವೆ ಯಾವದೇ ಅಶುದ್ಧತ್ವದಿಂದ ಅಶುದ್ಧ ಮಾಡುವ ಮನುಷ್ಯನನ್ನಾಗಲಿ ಮುಟ್ಟಿದವನು--

ಯಾಜಕಕಾಂಡ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी