ಯೆಹೆಜ್ಕೇಲನು 32:16

ಇದು ಅವರು ಗೋಳಾಡುವಂತಹ ಗೋಳಾಟವಾಗಿದೆ; ಐಗುಪ್ತದ ವಿಷಯವಾಗಿಯೂ ಅದರ ಎಲ್ಲಾ ಜನ ಸಮೂಹದ ವಿಷಯವಾಗಿಯೂ ಜನಾಂಗಗಳ ಕುಮಾರ್ತೆಯರು ಇದನ್ನು ಕುರಿತು ಗೋಳಾಡುವರು; ಎಂದು ದೇವರಾದ ಕರ್ತನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 32

14ಆಮೇಲೆ ನಾನು ಆ ನೀರುಗಳನ್ನು ಆಳವಾಗಿ ಮಾಡುವೆನು; ಅದರ ನದಿಗಳನ್ನು ಎಣ್ಣೆಯ ಹಾಗೆ ಹರಿಯುವಂತೆ ಮಾಡು ವೆನು ಎಂದು ದೇವರಾದ ಕರ್ತನು ಹೇಳುತ್ತಾನೆ.

15ನಾನು ಐಗುಪ್ತದೇಶವನ್ನು ಹಾಳು ಮಾಡುವಾಗ, ಆ ದೇಶವು ಪರಿಪೂರ್ಣವಾಗಿ ಹಾಳಾಗುವಾಗ ಮತ್ತು ನಾನು ಅವರ ನಿವಾಸಿಗಳನ್ನೆಲ್ಲಾ ಹೊಡೆಯುವಾಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.

16ಇದು ಅವರು ಗೋಳಾಡುವಂತಹ ಗೋಳಾಟವಾಗಿದೆ; ಐಗುಪ್ತದ ವಿಷಯವಾಗಿಯೂ ಅದರ ಎಲ್ಲಾ ಜನ ಸಮೂಹದ ವಿಷಯವಾಗಿಯೂ ಜನಾಂಗಗಳ ಕುಮಾರ್ತೆಯರು ಇದನ್ನು ಕುರಿತು ಗೋಳಾಡುವರು; ಎಂದು ದೇವರಾದ ಕರ್ತನು ಹೇಳುತ್ತಾನೆ.

17ಇದಲ್ಲದೆ ಹನ್ನೆರಡನೇ ವರ್ಷದ, ತಿಂಗಳಿನ ಹದಿನೈದನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--

18ಮನುಷ್ಯಪುತ್ರನೇ, ಐಗುಪ್ತದ ಜನಸಮೂಹದ ವಿಷಯವಾಗಿ ಗೋಳಾಡು. ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಕುಮಾರ್ತೆ ಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಯೊ ಳಗೆ ಇಳಿಯುವವರ ಜೊತೆ ತಳ್ಳಿಬಿಡು.

ಯೆಹೆಜ್ಕೇಲನು 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी