೧ ಸಮುವೇಲನು 13:2

ಮೂರು ಸಾವಿರ ಜನರಲ್ಲಿ ಎರಡು ಸಾವಿರ ಜನರು ಸೌಲನು ಇರುವ ಮಿಕ್ಮಾಷಿ ನಲ್ಲಿಯೂ ಬೇತೇಲಿನ ಪರ್ವತದಲ್ಲಿಯೂ ಇದ್ದರು; ಸಾವಿರ ಜನರು ಯೋನಾತಾನನ ಸಂಗಡ ಬೆನ್ಯಾವಿಾನ್‌ ದೇಶದ ಗಿಬೆಯದಲ್ಲಿದ್ದರು. ಉಳಿದ ಜನರನ್ನು ಅವರ ವರ ಡೇರೆಗಳಿಗೆ ಕಳುಹಿಸಿಬಿಟ್ಟನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 13

1ಸೌಲನು ಒಂದು ವರುಷ ಆಳಿದನು;ಇಸ್ರಾಯೇಲ್ಯರನ್ನು ಎರಡು ವರುಷ ಆಳಿ ದಾಗ ಸೌಲನು ಇಸ್ರಾಯೇಲ್ಯರಲ್ಲಿ ಮೂರು ಸಾವಿರ ಜನರನ್ನು ಆದುಕೊಂಡನು.

2ಮೂರು ಸಾವಿರ ಜನರಲ್ಲಿ ಎರಡು ಸಾವಿರ ಜನರು ಸೌಲನು ಇರುವ ಮಿಕ್ಮಾಷಿ ನಲ್ಲಿಯೂ ಬೇತೇಲಿನ ಪರ್ವತದಲ್ಲಿಯೂ ಇದ್ದರು; ಸಾವಿರ ಜನರು ಯೋನಾತಾನನ ಸಂಗಡ ಬೆನ್ಯಾವಿಾನ್‌ ದೇಶದ ಗಿಬೆಯದಲ್ಲಿದ್ದರು. ಉಳಿದ ಜನರನ್ನು ಅವರ ವರ ಡೇರೆಗಳಿಗೆ ಕಳುಹಿಸಿಬಿಟ್ಟನು.

3ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ಕೇಳಿಬಂತು. ಆದದರಿಂದ ಸೌಲನು ದೇಶದಲ್ಲೆಲ್ಲಾ ಇಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.

4ಫಿಲಿಷ್ಟಿಯರ ಠಾಣ ವನ್ನು ಸೌಲನು ಹೊಡೆದನೆಂದೂ ಫಿಲಿಷ್ಟಿಯರಿಗೆ ಇಸ್ರಾಯೇಲ್ಯರು ಅಸಹ್ಯವಾದವರಾದರೆಂದೂ ಸಮಸ್ತ ಇಸ್ರಾಯೇಲ್ಯರು ಕೇಳಿದಾಗ ಸೌಲನ ಹಿಂದೆ ಹೋಗಲು ಗಿಲ್ಗಾಲಿಗೆ ಕರೆಸಿಕೊಳ್ಳಲ್ಪಟ್ಟರು.

೧ ಸಮುವೇಲನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी