ಯೆರೆಮಿಯ 32:37

ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 32

35ತಮ್ಮ ಕುಮಾರ ಕುಮಾರ್ತೆಯರನ್ನು ಮೋಲೆಕನಿಗೆ ಬೆಂಕಿ ದಾಟಿಸುವ ಹಾಗೆ ಹಿನ್ನೋಮನ ಮಗನ ಉನ್ನತ ಸ್ಥಳಗಳನ್ನು ಕಟ್ಟಿಸಿದ್ದಾರೆ; ಅದನ್ನು ನಾನು ಅವರಿಗೆ ಆಜ್ಞಾಪಿಸಲಿಲ್ಲ; ಅಂಥಾ ಅಸಹ್ಯ ನಡಿಸಿ, ಯೆಹೂದ ವನ್ನು ಪಾಪ ಮಾಡಿಸುವದು ನನ್ನ ಮನಸ್ಸಿನೊಳಗೆ ಬರಲಿಲ್ಲ.

36ಹೀಗಾದರೂ ಈಗ ಅದು ಕತ್ತಿಯಿಂದಲೂ ಬರದಿಂದಲೂ ಜಾಡ್ಯದಿಂದಲೂ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದೆಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--

37ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.

38ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು.

39ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.

ಯೆರೆಮಿಯ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी