ಯೆಶಾಯ 41:21

ನಿಮ್ಮ ವ್ಯಾಜ್ಯವನ್ನು ತನ್ನಿರಿ ಎಂದು ಕರ್ತನು ಅನ್ನುತ್ತಾನೆ; ನಿಮ್ಮ ಬಲವಾದ ಕಾರಣಗಳನ್ನು ತನ್ನಿರಿ ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 41

19ಅರಣ್ಯದಲ್ಲಿ ದೇವದಾರು, ಜಾಲಿಮರ, ಸುಗಂಧ, ಒಲೀವ ಮರಗಳನ್ನು ನಾನು ನೆಡುವೆನು, ಮರುಭೂಮಿಯಲ್ಲಿ ತುರಾಯಿ, ತಪಸಿಟ್ಟಿ, ತಿಲಕವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.

20ಆಗ ಕರ್ತನ ಹಸ್ತವು ಇದನ್ನು ಮಾಡಿದೆ ಎಂದೂ ಇಸ್ರಾ ಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ನೋಡಿ, ತಿಳಿದು ಮನಸ್ಸಿಗೆ ತಂದು ಗ್ರಹಿಸಿ ಕೊಳ್ಳುವರು.

21ನಿಮ್ಮ ವ್ಯಾಜ್ಯವನ್ನು ತನ್ನಿರಿ ಎಂದು ಕರ್ತನು ಅನ್ನುತ್ತಾನೆ; ನಿಮ್ಮ ಬಲವಾದ ಕಾರಣಗಳನ್ನು ತನ್ನಿರಿ ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ.

22ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು.

23ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ; ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದ ನ್ನಾಗಲಿ ಕೆಟ್ಟದ್ದನ್ನಾಗಲಿಮಾಡಿರಿ.

ಯೆಶಾಯ 41 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी