ಆದಿಕಾಂಡ 42:19

ನೀವು ಸತ್ಯವಂತರಾಗಿದ್ದರೆ ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿಸಲ್ಪಡಲಿ. ಆದರೆ ನೀವು ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯವನ್ನು ತಕ್ಕೊಂಡು ಹೋಗಿರಿ.

ಸಂದರ್ಭದೊಂದಿಗೆ ಓದಿ · ಆದಿಕಾಂಡ 42

17ಯೋಸೇಫನು ಎಲ್ಲರನ್ನು ಒಟ್ಟಿಗೆ ಮೂರು ದಿನಗಳು ಸೆರೆಯಲ್ಲಿಟ್ಟನು.

18ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.

19ನೀವು ಸತ್ಯವಂತರಾಗಿದ್ದರೆ ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿಸಲ್ಪಡಲಿ. ಆದರೆ ನೀವು ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯವನ್ನು ತಕ್ಕೊಂಡು ಹೋಗಿರಿ.

20ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು, ನೀವು ಸಾಯದೆ ಇರುವಿರಿ ಅಂದನು. ಅವರು ಹಾಗೆಯೇ ಮಾಡಿದರು.

21ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.

ಆದಿಕಾಂಡ 42 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी