೧ ಅರಸುಗಳು 3:9

ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 3

7ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ.

8ಇದಲ್ಲದೆ ನಿನ್ನ ಸೇವಕನು ನೀನು ಆದುಕೊಂಡ ನಿನ್ನ ಮಹಾಜನರ ಮಧ್ಯದಲ್ಲಿ ಇದ್ದಾನೆ. ಆ ಜನರು ಬಹಳವಾಗಿರುವ ದರಿಂದ ಅವರನ್ನು ಎಣಿಸಲೂ ಲೆಕ್ಕ ಬರೆಯಲೂ ಆಗದು.

9ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.

10ಸೊಲೊಮೋನನು ಕೇಳಿದ ಈ ಮಾತು ಕರ್ತನ ದೃಷ್ಟಿಗೆ ಒಳ್ಳೇದಾಗಿತ್ತು.

11ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ

೧ ಅರಸುಗಳು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी