ಮಾರ್ಕನು 2:18

ಪದ್ಧತಿಯ ಪ್ರಕಾರ ಉಪವಾಸ ಮಾಡುತ್ತಿದ್ದ ಯೋಹಾನನ ಮತ್ತು ಫರಿಸಾಯರ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಯೋಹಾನನ ಮತ್ತು ಫರಿಸಾಯರ ಶಿಷ್ಯರು ಉಪವಾಸಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸ ಮಾಡುವದಿಲ್ಲ ಎಂದು ಕೇಳಿದರು.

ಸಂದರ್ಭದೊಂದಿಗೆ ಓದಿ · ಮಾರ್ಕನು 2

16ಆತನು ಸುಂಕದವರ ಮತ್ತು ಪಾಪಿಗಳ ಜೊತೆಯಲ್ಲಿ ಊಟ ಮಾಡುತ್ತಿರು ವದನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ--ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ತಿನ್ನುವದು ಮತ್ತು ಕುಡಿಯುವದು ಹೇಗೆ ಅಂದರು.

17ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು.

18ಪದ್ಧತಿಯ ಪ್ರಕಾರ ಉಪವಾಸ ಮಾಡುತ್ತಿದ್ದ ಯೋಹಾನನ ಮತ್ತು ಫರಿಸಾಯರ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಯೋಹಾನನ ಮತ್ತು ಫರಿಸಾಯರ ಶಿಷ್ಯರು ಉಪವಾಸಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸ ಮಾಡುವದಿಲ್ಲ ಎಂದು ಕೇಳಿದರು.

19ಅದಕ್ಕೆ ಯೇಸು ಅವರಿಗೆ--ಮದಲಿಂಗನು ಅವರ ಸಂಗಡ ಇರುವಾಗ ಮದಲಗಿ ತ್ತಿಯ ಮನೇಮಕ್ಕಳು ಉಪವಾಸ ಮಾಡುವರೋ? ಮದಲಿಂಗನು ಅವರ ಸಂಗಡ ಇರುವ ತನಕ ಅವರು ಉಪವಾಸ ಮಾಡುವದಿಲ್ಲ.

20ಆದರೆ ಮದಲಿಂಗನು ಅವರ ಬಳಿಯಿಂದ ತೆಗೆಯಲ್ಪಡುವ ದಿವಸಗಳು ಬರುತ್ತವೆ; ಆಗ ಅವರು ಆ ದಿವಸಗಳಲ್ಲಿ ಉಪವಾಸ ಮಾಡುವರು.

ಮಾರ್ಕನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी