ಅಪೊಸ್ತಲರ ಕೃತ್ಯಗಳು 18:27

ಅವನು ಅಖಾಯಕ್ಕೆ ಹೋಗಬೇಕೆಂದು ಮನಸ್ಸು ಮಾಡಿದಾಗ ಅಲ್ಲಿದ್ದ ಶಿಷ್ಯರು ಅವನನ್ನು ಸೇರಿಸಿಕೊಳ್ಳಬೇಕೆಂದು ಪ್ರೋತ್ಸಾಹ ಮಾಡಿ ಸಹೋದರರು ಅವರಿಗೆ ಬರೆದರು; ಅವನು ಅಲ್ಲಿಗೆ ಬಂದು ಕೃಪೆಯಿಂದ ನಂಬಿದ್ದವರಿಗೆ ಹೆಚ್ಚಾಗಿ ಸಹಾಯ ಮಾಡಿದನು;

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 18

25ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು.

26ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು.

27ಅವನು ಅಖಾಯಕ್ಕೆ ಹೋಗಬೇಕೆಂದು ಮನಸ್ಸು ಮಾಡಿದಾಗ ಅಲ್ಲಿದ್ದ ಶಿಷ್ಯರು ಅವನನ್ನು ಸೇರಿಸಿಕೊಳ್ಳಬೇಕೆಂದು ಪ್ರೋತ್ಸಾಹ ಮಾಡಿ ಸಹೋದರರು ಅವರಿಗೆ ಬರೆದರು; ಅವನು ಅಲ್ಲಿಗೆ ಬಂದು ಕೃಪೆಯಿಂದ ನಂಬಿದ್ದವರಿಗೆ ಹೆಚ್ಚಾಗಿ ಸಹಾಯ ಮಾಡಿದನು;

28ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.

ಅಪೊಸ್ತಲರ ಕೃತ್ಯಗಳು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी