ಇಸ್ರಾಯೇಲ್ಯರೆಲ್ಲರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಟ್ಟರು.
16ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.
17ಆಗ ಯಾರೊಬ್ಬಾಮನ ಪತ್ನಿ ಎದ್ದು ಹೊರಟು ತಿರ್ಚಕ್ಕೆ ಬಂದಳು. ಕರ್ತನು ಪ್ರವಾದಿಯಾದ ತನ್ನ ಸೇವಕನಾಗಿರುವ ಅಹೀಯನ ಮುಖಾಂತರ ತಿಳಿಸಿದ ವಾಕ್ಯದ ಪ್ರಕಾರವೇ ಅವಳು ಬಾಗಿಲ ಹೊಸ್ತಿಲ ಬಳಿಗೆ ಬಂದಾಗ ಮಗನು ಸತ್ತನು.
18ಇಸ್ರಾಯೇಲ್ಯರೆಲ್ಲರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಟ್ಟರು.
19ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ.
20ಯಾರೊಬ್ಬಾಮನು ಆಳಿದ ದಿವಸಗಳು ಇಪ್ಪತ್ತೆರಡು ವರುಷಗಳಾಗಿದ್ದವು. ಅವನು ತನ್ನ ಪಿತೃಗಳ ಸಂಗಡ ಮಲಗಿದನು. ಅವನ ಮಗನಾದ ನಾದಾಬನು ಅವನಿಗೆ ಬದಲಾಗಿ ಆಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ